tax ಮುಂದಿನ 6 ತಿಂಗಳಲ್ಲಿ ಹೊಸ ಆದಾಯ ತೆರಿಗೆ ಕಾಯ್ದೆಯ ಅನುಷ್ಠಾನ; ಏನಾಗುತ್ತದೆ?
ಹೊಸ ಕಾಯಿದೆಯು ಆದಾಯ ತೆರಿಗೆ ಕಾಯಿದೆ, 1961 ರ ಬದಲಿಗೆ ಬರಲಿದೆ
ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ!
ನವದೆಹಲಿ: ಮುಂದಿನ 6 ತಿಂಗಳಲ್ಲಿ ಹೊಸ ಆದಾಯ ತೆರಿಗೆ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. 1961 ರ ಆದಾಯ ತೆರಿಗೆ ಕಾಯ್ದೆಯನ್ನು ರದ್ದುಗೊಳಿಸಲಾಗುವುದು. ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದು, ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಹೊಸ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ. ಹೊಸ ಕಾಯಿದೆಯ ಕೆಲವು ಅಂಶಗಳನ್ನು ಅರ್ಥಮಾಡಿಕೊಳ್ಳುವುದು ತುಂಬಾ ಸುಲಭ. ಹೊಸ ಕಾಯಿದೆಯನ್ನು ಸ್ಪಷ್ಟ ಮತ್ತು ಸರಳ ಭಾಷೆಯಲ್ಲಿ ರೂಪಿಸಲಾಗಿದೆ ಎಂದು ಹೇಳಿದರು.
ತೆರಿಗೆ ಪಾವತಿದಾರರಲ್ಲಿ ಭಯ ಮತ್ತು ಆತಂಕವನ್ನು ಹೋಗಲಾಡಿಸಲು ಸರಳ ಭಾಷೆಯಲ್ಲಿ ವ್ಯವಹರಿಸುವಂತೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಇಲಾಖೆಗೆ ಸೂಚಿಸಿದ್ದಾರೆ. ಆದಾಯ ತೆರಿಗೆ ದಿನಾಚರಣೆಯಲ್ಲಿ ಭಾಗವಹಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ನಿಮ್ಮ ಅಧಿಕಾರವನ್ನು ಎಚ್ಚರಿಕೆಯಿಂದ ಬಳಸಿ. ತೆರಿಗೆ ಪಾವತಿದಾರರಿಗೆ ಯಾವುದೇ ರೀತಿಯ ಕಿರುಕುಳ ನೀಡದಂತೆಯೂ ಸೂಚಿಸಲಾಗಿದೆ.
ಏತನ್ಮಧ್ಯೆ, ವಿವಾದಗಳನ್ನು ಕಡಿಮೆ ಮಾಡಲು ಮತ್ತು ತೆರಿಗೆ ಪಾವತಿಯನ್ನು ಖಚಿತಪಡಿಸಿಕೊಳ್ಳಲು ಹೊಸ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಸಿಬಿಡಿಟಿ ಅಧ್ಯಕ್ಷ ರವಿ ಅಗರವಾಲ್ ಹೇಳಿದ್ದಾರೆ. ಸುಲಭವಾಗಿ ಓದಿ ಅರ್ಥ ಮಾಡಿಕೊಳ್ಳುವುದು ಬದಲಾವಣೆಯ ಹಿಂದಿನ ಮೂಲ ಉದ್ದೇಶ ಎನ್ನಲಾಗಿದೆ.